Galatians 1:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮಗೆ ಇದನ್ನು ಮೊದಲೇ ತಿಳಿಸಿದ್ದರೂ ಈಗ ಮತ್ತೆ ಹೇಳುತ್ತೇನೆ. ನೀವು ಈಗಾಗಲೇ ಸ್ವೀಕರಿಸಿಕೊಂಡಿರುವ ಸತ್ಯಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ಸಾರಿದರೆ ಅವನು ಶಾಪಗ್ರಸ್ತನಾಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.
Kannada BSI Bible 2016
ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿದ್ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.
Kannada Bible (KNCL) BSI 2016
ನೀವು ಅಂಗೀಕರಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ಸಾರುವವನು ಶಾಪಗ್ರಸ್ತನಾಗಲಿ ಎಂದು ನಾನು ಮೊದಲೇ ಹೇಳಿದಂತೆ, ಮತ್ತೊಮ್ಮೆ ಒತ್ತಿ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ, ಅವನು ಶಾಪಗ್ರಸ್ತನಾಗಲಿ ಎಂದು ಮೊದಲು ಹೇಳಿದಂತೆಯೇ ಈಗಲೂ ನಾನು ಪುನಃ ಹೇಳುತ್ತೇನೆ.