Galatians 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಡಜನರನ್ನು ಜ್ಞಾಪಕದಲ್ಲಿಟ್ಟುಕೊಂಡು ಅವರಿಗೆ ಸಹಾಯಮಾಡಬೇಕೆಂಬ ಒಂದೇ ಒಂದು ಸಂಗತಿಯನ್ನು ಅವರು ನಮಗೆ ತಿಳಿಸಿದರು. ನಾನೂ ಈ ಕಾರ್ಯವನ್ನು ಮಾಡಬೇಕೆಂದುಕೊಂಡಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.
Kannada BSI Bible 2016
ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವು ನಮ್ಮಲ್ಲಿರುವ ಬಡವರನ್ನು ಜ್ಞಾಪಕಮಾಡಿಕೊಳ್ಳಬೇಕೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.
Kannada Bible (KNCL) BSI 2016
ಅವರಲ್ಲಿದ್ದ ಬಡಬಗ್ಗರಿಗೆ ಮರೆಯದೆ ನೆರವಾಗಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಮಾಡಬೇಕೆಂದು ಎಣಿಸಿದುದು ಅದೇ ಆಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಾವು ಬಡವರನ್ನು ಜ್ಞಾಪಕಮಾಡಿಕೊಳ್ಳಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಇದನ್ನು ಮಾಡುವುದರಲ್ಲಿ ಆಸಕ್ತನಾಗಿದ್ದೆನು.