Galatians 2:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಡೆದ ಸಂಗತಿ ಏನೆಂದರೆ: ಪೇತ್ರನು ಮೊದಲು ಅಂತಿಯೋಕ್ಯಕ್ಕೆ ಬಂದಾಗ ಅವನು ಯೆಹೂದ್ಯರಲ್ಲದವರೊಂದಿಗೆ ಊಟಮಾಡಿದನು ಮತ್ತು ಅನ್ಯೋನ್ಯತೆಯಿಂದಿದ್ದನು. ಆ ಬಳಿಕ ಯಾಕೋಬನಿಂದ ಕಳುಹಿಸಲ್ಪಟ್ಟಿದ್ದ ಕೆಲವು ಯೆಹೂದ್ಯರು ಬಂದರು. ಆಗ, ಪೇತ್ರನು ಯೆಹೂದ್ಯರಲ್ಲದವರೊಂದಿಗೆ ಊಟಮಾಡುವುದನ್ನು ನಿಲ್ಲಿಸಿದನು. ಪೇತ್ರನು ತನ್ನನ್ನು ಯೆಹೂದ್ಯರಲ್ಲದವರಿಂದ ಬೇರ್ಪಡಿಸಿಕೊಂಡನು. ಯೆಹೂದ್ಯರಲ್ಲದವರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಂಬಿಕೊಂಡಿದ್ದ ಯೆಹೂದ್ಯರಿಗೆ ಅವನು ಹೆದರಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.
Kannada BSI Bible 2016
ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಯಾಕೋಬನ ಕಡೆಯಿಂದ ಕೆಲವರು ಬರುವದಕ್ಕೆ ಮುಂಚೆ ಅವನು ಅನ್ಯಜನರ ಸಂಗಡ ಊಟಮಾಡುತ್ತಿದ್ದನು; ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.
Kannada Bible (KNCL) BSI 2016
ಯಕೋಬನ ಕಡೆಯಿಂದ ಕೆಲವು ಸಹೋದರರು ಬರುವುದಕ್ಕೆ ಮುಂಚೆ ಆತನು ಅನ್ಯಧರ್ಮೀಯರೊಡನೆ ಊಟಮಾಡುತ್ತಿದ್ದನು. ಆದರೆ ಅವರು ಬಂದ ಮೇಲೆ ಸುನ್ನತಿ ಪರವಾದಿಗಳಿಗೆ ಅಂಜಿ ಅನ್ಯಧರ್ಮೀಯರಿಂದ ದೂರವಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮುಂಚೆ ಪೇತ್ರನು ಯೆಹೂದ್ಯರಲ್ಲದವರೊಡನೆ ಊಟಮಾಡುತ್ತಿದ್ದನು. ಅವರು ಬಂದ ಮೇಲೆ ಯೆಹೂದ್ಯರಿಗೆ ಅವನು ಭಯಪಟ್ಟು ಯೆಹೂದ್ಯರಲ್ಲದವರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು.