Galatians 2:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”
Kannada BSI Bible 2016
ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯುವದಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ - ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ - ನೀವು ಯೆಹೂದ್ಯರ ಪದ್ಧತಿಗಳನ್ನು ಅನುಸರಿಸಬೇಕೆಂದು ನೀನು ಬಲಾತ್ಕಾರ ಮಾಡುವದು ಹೇಗೆ?
Kannada Bible (KNCL) BSI 2016
ಅವರ ಈ ನಡತೆ, ಶುಭಸಂದೇಶದ ಸತ್ಯಕ್ಕೆ ಅನುಗುಣವಾದುದಲ್ಲ ಎಂದು ನನಗೆ ಮನದಟ್ಟಾಯಿತು. ಆಗ ನಾನು ಅವರೆಲ್ಲರ ಸಮ್ಮುಖದಲ್ಲೇ ಕೇಫನಿಗೆ: “ನೀನು ಯೆಹೂದ್ಯನಾಗಿದ್ದೂ ಯೆಹೂದ್ಯರಂತೆ ನಡೆಯದೆ ಅನ್ಯಧರ್ಮೀಯರಂತೆ ನಡೆದುಕೊಳ್ಳುತ್ತ ಇದ್ದಿಯಲ್ಲವೇ? ಹೀಗಿರುವಲ್ಲಿ ಅನ್ಯಧರ್ಮೀಯರು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ನೀನು ಒತ್ತಾಯಪಡಿಸುವುದಾದರೂ ಹೇಗೆ?” ಎಂದು ಕೇಳಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.