Galatians 2:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
Kannada BSI Bible 2016
ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದರಿಂದ ನಾವು ಸಹ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿಸಲ್ಪಡುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು; ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ.
Kannada Bible (KNCL) BSI 2016
ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.