Galatians 2:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರಾದ ನಾವು ನೀತಿವಂತರಾಗಲು ಕ್ರಿಸ್ತನ ಬಳಿಗೆ ಬಂದೆವು. ಆದ್ದರಿಂದ ನಾವು ಸಹ ಪಾಪಿಗಳಾಗಿದ್ದೇವೆಂಬುದು ಸ್ಪಷ್ಟವಾಗಿದೆ. ಕ್ರಿಸ್ತನು ನಮ್ಮನ್ನು ಪಾಪಿಗಳನ್ನಾಗಿ ಮಾಡುತ್ತಾನೆಂಬುದು ಇದರ ಅರ್ಥವೇ? ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ.
Kannada BSI Bible 2016
ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾವು ಕ್ರಿಸ್ತನ ಆಶ್ರಯದಲ್ಲಿ ನೀತಿವಂತರೆಂಬ ನಿರ್ಣಯ ಹೊಂದುವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನೆಂದು ಹೇಳಬೇಕೇನು? ಎಂದಿಗೂ ಹೇಳಬಾರದು.
Kannada Bible (KNCL) BSI 2016
ಕ್ರಿಸ್ತಯೇಸುವಿನ ಮುಖಾಂತರ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಯತ್ನಿಸುತ್ತಿರುವ ನಾವು ಅನ್ಯಧರ್ಮೀಯರಂತೆ ಕಂಡುಬರುವುದಾದರೆ, ಕ್ರಿಸ್ತಯೇಸುವೇ ಪಾಪಕ್ಕೆ ಕಾರಣರೆಂದು ಹೇಳಿದಂತಾಗುತ್ತದೆ. ಆದರೆ ಅದೆಂದಿಗೂ ಆಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ, ನಾವು ಕ್ರಿಸ್ತ ಯೇಸುವಿನಲ್ಲಿ ನೀತಿವಂತರಾಗಲು ಪ್ರಯತ್ನಿಸುವ ನಾವೂ ಪಾಪಿಗಳಾಗಿ ಇರುವುದಾದರೆ, ಕ್ರಿಸ್ತ ಯೇಸು ಪಾಪಕ್ಕೆ ಪ್ರೋತ್ಸಾಹ ನೀಡಿದ ಹಾಗಾಗುವುದೋ? ಎಂದಿಗೂ ಇಲ್ಲ.