Galatians 2:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಧರ್ಮಶಾಸ್ತ್ರಕ್ಕಾಗಿ ಜೀವಿಸುವುದನ್ನು ತೊರೆದುಬಿಟ್ಟೆನು. ನನ್ನನ್ನು ಧರ್ಮಶಾಸ್ತ್ರವೇ ಕೊಂದಿತು. ಈಗ ನಾನು ದೇವರಿಗಾಗಿ ಜೀವಿಸಬೇಕೆಂದು ಧರ್ಮಶಾಸ್ತ್ರದ ಪಾಲಿಗೆ ಸತ್ತುಹೋದೆನು. ನಾನು ಕ್ರಿಸ್ತನೊಂದಿಗೆ ಶಿಲುಬೆಗೇರಿಸಲ್ಪಟ್ಟೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.
Kannada BSI Bible 2016
ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಂತೂ ದೇವರಿಗಾಗಿ ಜೀವಿಸುವದಕ್ಕೋಸ್ಕರ ಧರ್ಮಪ್ರಮಾಣದ ಮೂಲಕವಾಗಿ ಧರ್ಮಪ್ರಮಾಣದ ಪಾಲಿಗೆ ಸತ್ತೆನು.
Kannada Bible (KNCL) BSI 2016
ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ಧರ್ಮಶಾಸ್ತ್ರದ ಮೂಲಕ, ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ನಿಯಮದ ಮೂಲಕ, ನಿಯಮದ ಪಾಲಿಗೆ ಸತ್ತವನಾಗಿದ್ದೇನೆ.