Galatians 2:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದು ದೇವರ ವರವಾಗಿದೆ ಮತ್ತು ನನಗೆ ಅತಿಮುಖ್ಯವಾದದ್ದಾಗಿದೆ. ಏಕೆಂದರೆ ಧರ್ಮಶಾಸ್ತ್ರವು ನಮ್ಮನ್ನು ನೀತಿವಂತರನ್ನಾಗಿ ಮಾಡಬಹುದಾಗಿದ್ದರೆ, ಕ್ರಿಸ್ತನು ಸಾಯುವ ಅಗತ್ಯವೇ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.
Kannada BSI Bible 2016
ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ಕರ್ಮಮಾರ್ಗದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದಕ್ಕೆ ಕಾರಣವೇ ಇಲ್ಲ.
Kannada Bible (KNCL) BSI 2016
ದೇವರ ಅನುಗ್ರಹವನ್ನು ನಿರಾಕರಿಸುವಂಥವನು ನಾನಲ್ಲ. ಧರ್ಮಶಾಸ್ತ್ರದ ಮೂಲಕ ದೇವರೊಡನೆ ಸತ್ಸಂಬಂಧವು ದೊರಕುವುದಾದರೆ ಕ್ರಿಸ್ತಯೇಸು ಮರಣಕ್ಕೀಡಾದುದು ನಿರರ್ಥಕವೇ ಸರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!”