Galatians 2:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 3
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.
Kannada BSI Bible 2016
ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭೆಗೆ ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋದರರು ಅಲ್ಲಿ ಇದ್ದದರಿಂದ ಬಲಾತ್ಕಾರ ನಡೆದೀತೆಂಬ ಭಯವಿತ್ತು. ಅವರು ನಮ್ಮನ್ನೂ ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
Kannada Bible (KNCL) BSI 2016
ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.