Galatians 2:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ಸುಳ್ಳುಸಹೋದರರು ಬಯಸಿದ ಯಾವುದಕ್ಕೂ ನಾವು ಒಂದು ಕ್ಷಣವಾದರೂ ಒಪ್ಪಿಗೆ ಕೊಡಲಿಲ್ಲ. ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂಬುದೇ ನಮ್ಮ ಅಪೇಕ್ಷೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.
Kannada BSI Bible 2016
ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆ ಹೊತ್ತಾದರೂ ಸಮ್ಮತಿಪಡಲಿಲ್ಲ.
Kannada Bible (KNCL) BSI 2016
ಆದರೆ ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲಿಲ್ಲ. ಹೀಗೆ ನಿಮಗೋಸ್ಕರ ಶುಭಸಂದೇಶದ ಸತ್ಯಾರ್ಥವನ್ನು ಸುಭದ್ರವಾಗಿ ಇರಿಸಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲು ಒಪ್ಪಲಿಲ್ಲ.