Galatians 2:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಬೋಧಿಸುವ ಸುವಾರ್ತೆಗೆ ಅವರೇನೂ ಸೇರಿಸಲಿಲ್ಲ. (ಅವರು ಪ್ರಮುಖರಾಗಿದ್ದರೊ ಪ್ರಮುಖರಾಗಿರಲಿಲ್ಲವೊ ಅದು ನನಗೆ ಮುಖ್ಯವಲ್ಲ. ದೇವರಿಗೆ ಎಲ್ಲಾ ಜನರು ಒಂದೇ ಆಗಿದ್ದಾರೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.
Kannada BSI Bible 2016
ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರು ಮುಖದಾಕ್ಷಿಣ್ಯ ಮಾಡುವವನಲ್ಲ. ಮಾನಿಷ್ಠರೆನಿಸಿಕೊಂಡವರು ನನ್ನ ಮಾತಿಗೆ ಒಪ್ಪಿದರೇ ಹೊರತು ನನಗೇನೂ ಕಲಿಸಲಿಲ್ಲ.
Kannada Bible (KNCL) BSI 2016
ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿದ್ದ ಸಭೆಯ ನಾಯಕರೂ ಸಹ ನನ್ನ ಸಂದೇಶದ ಬಗ್ಗೆ ನನಗೆ ಏನೂ ಹೇಳಲಿಲ್ಲ. ಅವರು ಎಂಥವರು ಎಂಬುದು ನನಗೆ ಮುಖ್ಯವಲ್ಲ; ಏಕೆಂದರೆ, ದೇವರು ಪಕ್ಷಪಾತಿಯಲ್ಲ.