Galatians 2:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರಿಗೆ ಅಪೊಸ್ತಲನಾಗಿ ಕೆಲಸ ಮಾಡಲು ದೇವರು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿ ಕೆಲಸ ಮಾಡಲು ನನಗೂ ವಹಿಸಿ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು.
Kannada BSI Bible 2016
ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ ಹಾಗೆಯೇ ಸುನ್ನತಿಯಿಲ್ಲದವರಿಗೆ ಅದನ್ನು ಸಾರುವ ಕೆಲಸವು ನನಗೆ ಕೊಟ್ಟಿರುವದನ್ನು
Kannada Bible (KNCL) BSI 2016
ಹೌದು, ಯೆಹೂದ್ಯರಿಗೆ ಪ್ರೇಷಿತನಾಗುವಂತೆ ಪೇತ್ರನನ್ನು ಪ್ರೇರೇಪಿಸಿದ ದೇವರು, ಯೆಹೂದ್ಯರಲ್ಲದವರಿಗೆ ಪ್ರೇಷಿತನಾಗಲು ನನ್ನನ್ನು ಪ್ರೇರೇಪಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಯೆಹೂದ್ಯರಿಗೆ ಅಪೊಸ್ತಲನಾಗಿರುವ ಪೇತ್ರನಲ್ಲಿ ಕಾರ್ಯಮಾಡಿದ ದೇವರೇ, ಯೆಹೂದ್ಯರಲ್ಲದವರಿಗೆ ನಾನು ಅಪೊಸ್ತಲನಾಗಿರಲು ನನ್ನಲ್ಲಿ ಕಾರ್ಯಮಾಡಿದರು.