Galatians 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನನಗೆ ಈ ವಿಶೇಷವಾದ ವರವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರೆನಿಸಿಕೊಂಡಿದ್ದ ಯಾಕೋಬ, ಪೇತ್ರ, ಯೋಹಾನರು ಕಂಡುಕೊಂಡರು. ಆದ್ದರಿಂದ ಅವರು ಬಾರ್ನಬನನ್ನು ಮತ್ತು ನನ್ನನ್ನು ಸ್ವೀಕರಿಸಿಕೊಂಡರು. ಅವರು ನಮಗೆ, “ಪೌಲ ಮತ್ತು ಬಾರ್ನಬರೇ, ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ. ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ” ಎಂದು ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.
Kannada BSI Bible 2016
ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.
Kannada Bible (KNCL) BSI 2016
ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.