Galatians 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಧರ್ಮಶಾಸ್ತ್ರದ ಮೂಲಕ ಯಾವನೂ ನೀತಿವಂತನಾಗಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಪವಿತ್ರ ಗ್ರಂಥವು ಹೇಳುವಂತೆ, “ನಂಬಿಕೆಯ ಮೂಲಕ ನೀತಿವಂತನಾದವನು ಸದಾಕಾಲ ಜೀವಿಸುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ.
Kannada BSI Bible 2016
ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಕರ್ಮಮಾರ್ಗದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ ನೀತಿವಂತನು ನಂಬಿಕೆಯಿಂದಲೇ ಬದುಕುವನೆಂದು ಬರೆದದೆ.
Kannada Bible (KNCL) BSI 2016
ಇದಲ್ಲದೆ, ಧರ್ಮಶಾಸ್ತ್ರ ವಿಧಿಸುವುದನ್ನು ಪೂರೈಸುವುದರಿಂದ ಯಾರೂ ದೇವರೊಡನೆ ಸತ್ಸಂಬಂಧ ಪಡೆಯಲಾರರು ಎಂಬುದು ಸಹ ಸ್ಪಷ್ಟವಾಗಿದೆ. ಏಕೆಂದರೆ, “ಯಾರು ದೇವರೊಡನೆ ಸತ್ಸಂಬಂಧವನ್ನು ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಿಯಮದಿಂದ ದೇವರ ಮುಂದೆ ಯಾರೂ ನೀತಿವಂತರೆಂಬ ನಿರ್ಣಯವನ್ನು ಹೊಂದುವುದಿಲ್ಲವೆಂಬುದು ಸ್ಪಷ್ಟವಾಗಿದೆ. ಏಕೆಂದರೆ, “ನೀತಿವಂತನು ನಂಬಿಕೆಯಿಂದಲೇ ಬದುಕುವನು.”