Galatians 3:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಧರ್ಮಶಾಸ್ತ್ರವು ನಂಬಿಕೆಯ ಮಾರ್ಗವನ್ನು ಬಳಸದೆ, “ಈ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವವನ್ನು ಪಡೆದುಕೊಳ್ಳುತ್ತಾನೆ” ಎಂದು ಹೇಳುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ.
Kannada BSI Bible 2016
ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಕರ್ಮಮಾರ್ಗಕ್ಕೆ ನಂಬಿಕೆಯು ಆಧಾರವಲ್ಲ, ಅದರ ನೇಮಗಳನ್ನು ಆಚರಿಸಿದವನೇ ಅವುಗಳ ಮೂಲಕ ಬದುಕುವನು ಎಂದು ಬರೆದದೆ.
Kannada Bible (KNCL) BSI 2016
ಧರ್ಮಶಾಸ್ತ್ರ ವಿಶ್ವಾಸವನ್ನು ಆಧರಿಸಿಲ್ಲ, ಬದಲಿಗೆ, “ಅದರ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕವಾಗಿ ಜೀವಿಸುತ್ತಾನೆ,” ಎಂದು ಬರೆಯಲಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಯಮವು ನಂಬಿಕೆಯನ್ನು ಆಧಾರಗೊಂಡದ್ದಲ್ಲ. ಆದರೆ, “ನಿಯಮಗಳ ಕ್ರಿಯೆಗಳನ್ನು ಮಾಡುವವನು ಅವುಗಳ ಮೂಲಕ ಬದುಕುವನು.”