Galatians 3:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ನಾನು ನಿಮಗೊಂದು ಉದಾಹರಣೆಯನ್ನು ಕೊಡುತ್ತೇನೆ. ಒಬ್ಬನು ಇನ್ನೊಬ್ಬನೊಂದಿಗೆ ಮಾಡಿಕೊಳ್ಳುವ ಒಪ್ಪಂದದ ಬಗ್ಗೆ ಯೋಚಿಸಿ. ಆ ಒಪ್ಪಂದವು ಅಧಿಕೃತವಾದಾಗ ಅದನ್ನು ರದ್ದುಮಾಡುವುದಕ್ಕಾಗಲಿ ಅಥವಾ ಅದಕ್ಕೆ ಬೇರೆ ಏನಾದರು ಸೇರಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ದೈನಂದಿನ ಜೀವನದಿಂದ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ, ಒಬ್ಬನು ಮತ್ತೊಬ್ಬನೊಡನೆ ಸ್ಥಿರಪಡಿಸಿದ ಒಂದು ಒಪ್ಪಂದವು ಕೇವಲ ಮನುಷ್ಯನದ್ದಾಗಿದ್ದರೂ, ಅದನ್ನು ಯಾರೂ ರದ್ದುಮಾಡುವಂತಿಲ್ಲ ಮತ್ತು ಅದಕ್ಕೆ ಏನನ್ನೂ ಸೇರಿಸುವಂತಿಲ್ಲ.
Kannada BSI Bible 2016
ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ಲೋಕದ ವ್ಯವಹಾರವನ್ನು ಹಿಡಿದು ಮಾತಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ, ಅದಕ್ಕೆ ಹೆಚ್ಚು ಮಾತುಗಳನ್ನು ಕೂಡಿಸುವದಿಲ್ಲ.
Kannada Bible (KNCL) BSI 2016
ಪ್ರಿಯ ಸಹೋದರರೇ, ದೈನಂದಿನ ಜೀವನದಿಂದ ಒಂದು ಉದಾಹರಣೆಯನ್ನೇ ತೆಗೆದುಕೊಳ್ಳೋಣ: ಒಬ್ಬನು ಮತ್ತೊಬ್ಬನೊಡನೆ ಒಂದು ಒಪ್ಪಂದ ಮಾಡಿಕೊಳ್ಳುತ್ತಾನೆ. ಕ್ರಮಬದ್ಧವಾಗಿ ಅದನ್ನು ಮಾಡಿ ಮುಗಿಸಿದ ಮೇಲೆ ಯಾರೂ ಅದನ್ನು ರದ್ದುಮಾಡುವಂತಿಲ್ಲ, ಬದಲಾಯಿಸುವಂತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಾನು ದಿನನಿತ್ಯದ ವ್ಯವಹಾರದಂತೆ ಮಾತನಾಡುತ್ತಿದ್ದೇನೆ. ಮತ್ತೊಬ್ಬನೊಡನೆ ಯಾರಾದರೂ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದ ಮೇಲೆ ಯಾರೂ ಅದನ್ನು ರದ್ದು ಮಾಡುವುದಿಲ್ಲ, ಇಲ್ಲವೆ ಕೂಡಿಸುವುದಿಲ್ಲ.