Galatians 3:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ” ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.
Kannada BSI Bible 2016
ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.
Kannada Bible (KNCL) BSI 2016
ಹಾಗೆಯೇ, ದೇವರು ಅಬ್ರಹಾಮನಿಗೂ ಆತನ ಸಂತತಿಗೂ ವಾಗ್ದಾನಗಳನ್ನು ಮಾಡಿದರು. \ನಿನ್ನ ಸಂತತಿಗಳಿಗೆ\ ಎಂದು ಹೇಳಿ ಅನೇಕರನ್ನು ಸೂಚಿಸದೆ “ನಿನ್ನ ಸಂತತಿಗೆ” ಎಂದು ಹೇಳಿ ಒಬ್ಬ ವ್ಯಕ್ತಿಯನ್ನೇ ಆ ವಾಗ್ದಾನದಲ್ಲಿ ಸೂಚಿಸಿದರು. ಆ ವ್ಯಕ್ತಿಯೇ ಕ್ರಿಸ್ತಯೇಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳು ಮಾಡಲಾದವು. ಅದರಲ್ಲಿ, “ನಿನ್ನ ಸಂತತಿಗಳಿಗೆ,” ಎಂದು ಹೇಳಿ ಅನೇಕರನ್ನು ಸೂಚಿಸದೆ, “ನಿನ್ನ ಸಂತತಿಗೆ,” ಎಂದು ಹೇಳಿದ ಒಬ್ಬರನ್ನೇ ಸೂಚಿಸಿದೆ. ಆ ಒಬ್ಬ ವ್ಯಕ್ತಿ ಕ್ರಿಸ್ತ ಯೇಸುವೇ.