Galatians 3:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಹೇಳುತ್ತಿರುವುದೇನೆಂದರೆ, ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದನು. ಆದ್ದರಿಂದ ನಾನೂರಮೂವತ್ತು ವರ್ಷಗಳಾದ ನಂತರ ಬಂದ ಧರ್ಮಶಾಸ್ತ್ರವು ಅಬ್ರಹಾಮನಿಗೆ ದೇವರು ಮಾಡಿದ ವಾಗ್ದಾನವನ್ನು ರದ್ದುಪಡಿಸುವುದೂ ಇಲ್ಲ ಬದಲಾಯಿಸುವುದೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.
Kannada BSI Bible 2016
ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ತಾತ್ಪರ್ಯವೇನಂದರೆ, ದೇವರು ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರಮೂವತ್ತು ವರುಷಗಳ ಮೇಲೆ ಬಂದ ಧರ್ಮಶಾಸ್ತ್ರವು ರದ್ದುಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
Kannada Bible (KNCL) BSI 2016
ದೇವರು ಅಬ್ರಹಾಮನೊಂದಿಗೆ ಮಾಡಿಮುಗಿಸಿದ ಒಪ್ಪಂದವನ್ನು ನಾನೂರ ಮೂವತ್ತು ವರ್ಷಗಳಾದ ಮೇಲೆ ಬಂದ ಧರ್ಮಶಾಸ್ತ್ರದಿಂದ ರದ್ದುಪಡಿಸಲಾಗದು; ಆ ವಾಗ್ದಾನವನ್ನು ವ್ಯರ್ಥಪಡಿಸಲಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಹೇಳುವ ಮಾತಿನ ತಾತ್ಪರ್ಯ ಏನೆಂದರೆ, ದೇವರು ಸ್ಥಿರಪಡಿಸಿ ಮುಗಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರ್ಷಗಳ ತರುವಾಯ ಬಂದ ಮೋಶೆಯ ನಿಯಮವು ಆ ವಾಗ್ದಾನವನ್ನು ರದ್ದುಪಡಿಸಲಾಗದು ಮತ್ತು ವ್ಯರ್ಥಪಡಿಸಲಾಗದು.