Galatians 3:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ವಾಗ್ದಾನ ಮಾಡಿದಂಥವುಗಳು ಧರ್ಮಶಾಸ್ತ್ರದ ಅನುಸರಣೆಯಿಂದ ದೊರೆಯುತ್ತವೆಯೇ? ಇಲ್ಲ! ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನಾವು ಅವುಗಳನ್ನು ಪಡೆದುಕೊಳ್ಳಬಹುದಾಗಿದ್ದರೆ ಅವುಗಳನ್ನು ನಮಗೆ ಕೊಡುವಂಥದ್ದು ದೇವರ ವಾಗ್ದಾನವಲ್ಲ. ಆದರೆ ದೇವರು ತಾನು ಮಾಡಿದ ವಾಗ್ದಾನದ ಮೂಲಕ ತನ್ನ ಆಶೀರ್ವಾದಗಳನ್ನು ಅಬ್ರಹಾಮನಿಗೆ ಉಚಿತವಾಗಿ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನಿಗೆ ಸಿಕ್ಕ ಆ ಬಾಧ್ಯತೆ ಮೋಶೆಯ ಧರ್ಮಶಾಸ್ತ್ರದ ಮೇಲೆ ಆಧಾರಗೊಂಡಿರುವುದಾದರೆ, ವಾಗ್ದಾನದ ಮೇಲೆ ಆಧಾರವಾಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ದೇವರು ಅಬ್ರಹಾಮನಿಗೆ ಕೊಟ್ಟ ಬಾಧ್ಯತೆಯನ್ನು ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
Kannada BSI Bible 2016
ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಬಾಧ್ಯತೆಯು ಕರ್ಮಮಾರ್ಗದಿಂದ ದೊರೆಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯುವದಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
Kannada Bible (KNCL) BSI 2016
ದೇವರು ನಮಗೆ ಹಕ್ಕುಬಾಧ್ಯತೆಯಾಗಿ ಕೊಡುವುದು ಧರ್ಮಶಾಸ್ತ್ರದಿಂದ ಲಭಿಸುವುದಾದರೆ ಅದು ಇನ್ನು ದೇವವಾಗ್ದಾನದಿಂದ ಲಭಿಸದು ಎಂದಂತಾಯಿತು. ಆದರೆ ದೇವರು ಅದನ್ನು ಅಬ್ರಹಾಮನಿಗೆ ದಯಪಾಲಿಸಿದ್ದು ವಾಗ್ದಾನದ ಮೂಲಕವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಆ ಬಾಧ್ಯತೆಯು ನಿಯಮದ ಪ್ರಕಾರವಾಗಿದ್ದರೆ, ಅದು ಇನ್ನು ವಾಗ್ದಾನದ ಮೇಲೆ ಆಧಾರವಾದದ್ದಲ್ಲ. ಆದರೆ ದೇವರು ತಮ್ಮ ಕೃಪೆಯಿಂದ ಅಬ್ರಹಾಮನಿಗೆ ವಾಗ್ದಾನದ ಮೂಲಕವೇ ಆ ಬಾಧ್ಯತೆಯನ್ನು ಕೊಟ್ಟಿದ್ದಾರೆ.