Galatians 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?
Kannada BSI Bible 2016
ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ಸಂಗತಿಯನ್ನು ಮಾತ್ರ ನಿವ್ಮಿುಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ?
Kannada Bible (KNCL) BSI 2016
ನಿಮ್ಮ ಬಳಿ ಒಂದು ವಿಷಯವನ್ನು ಕೇಳಲಿಚ್ಛಿಸುತ್ತೇನೆ; ನೀವು ಪವಿತ್ರಾತ್ಮರನ್ನು ಪಡೆದುದು ಹೇಗೆ? ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲೋ? ಇಲ್ಲವೆ ಶುಭಸಂದೇಶವನ್ನು ಕೇಳಿ ವಿಶ್ವಾಸಿಸಿದ್ದರಿಂದಲೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?