Galatians 3:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.
Kannada BSI Bible 2016
ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳುಕೊಳ್ಳಬಾರದು. ಬದುಕಿಸುವದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಸಂದೇಹವಿಲ್ಲದೆ ಕರ್ಮಮಾರ್ಗದಿಂದಲೇ ನೀತಿಯುಂಟಾಗುತ್ತಿತ್ತು.
Kannada Bible (KNCL) BSI 2016
ಹಾಗಾದರೆ, ಧರ್ಮಶಾಸ್ತ್ರ ದೇವರ ವಾಗ್ದಾನಕ್ಕೆ ವಿರುದ್ಧವಾಗಿದೆಯೆಂದು ಹೇಳೋಣವೇ? ಎಂದಿಗೂ ಇಲ್ಲ. ಸಜ್ಜೀವಗೊಳಿಸುವ ಶಕ್ತಿಯನ್ನು ಧರ್ಮಶಾಸ್ತ್ರ ಹೊಂದಿದ್ದರೆ ಅದನ್ನು ಅನುಸರಿಸುವುದರಿಂದ ನಿಸ್ಸಂದೇಹವಾಗಿ ದೇವರೊಡನೆ ಸತ್ಸಂಬಂಧ ದೊರಕುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ ನಿಯಮವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಆಗಬಾರದು! ಕೊಡಲಾಗಿದ್ದ ನಿಯಮವು ಒಂದು ವೇಳೆ ಜೀವವನ್ನು ನೀಡುವುದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ, ನಿಶ್ಚಯವಾಗಿಯೂ ಮೋಶೆಯ ನಿಯಮದಿಂದ ನೀತಿವಂತರಾಗುತ್ತಿದ್ದೆವು.