Galatians 3:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಇದು ಸತ್ಯವಲ್ಲ. ಏಕೆಂದರೆ ಸಮಸ್ತವೂ ಪಾಪಕ್ಕೆ ಒಳಗಾಗಿದೆ ಎಂದು ಪವಿತ್ರ ಗ್ರಂಥ ಪ್ರಕಟಿಸುತ್ತದೆ. ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವವರಿಗೆ ಅವರ ನಂಬಿಕೆಯ ಆಧಾರದ ಮೇಲೆ ವಾಗ್ದಾನದ ಫಲವು ದೊರೆಯಬೇಕೆಂದೇ ಪವಿತ್ರ ಗ್ರಂಥವು ಹೀಗೆ ಪ್ರಕಟಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.
Kannada BSI Bible 2016
ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾಗದೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವದರಿಂದ ಉಂಟಾಗುವ ಆ ವಾಗ್ದಾನದ ಫಲವು ನಂಬುವವರಿಗೇ ಕೊಡಲ್ಪಡಬೇಕೆಂದು ಶಾಸ್ತ್ರವು ಸಮಸ್ತವನ್ನು ಪಾಪಕ್ಕೊಳಗಾಗಿದೆಯೆಂದು ತೀರ್ಮಾನಿಸಿತು.
Kannada Bible (KNCL) BSI 2016
ಅದಕ್ಕೆ ಬದಲಾಗಿ ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.