Galatians 3:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ನಂಬಿಕೆಯು ಬರುವುದಕ್ಕಿಂತ ಮೊದಲು ನಾವು ಧರ್ಮಶಾಸ್ತ್ರಕ್ಕೆ ಸೆರೆಯಾಳುಗಳಾಗಿದ್ದೆವು. ಬರಲಿದ್ದ ನಂಬಿಕೆಯ ಮಾರ್ಗವನ್ನು ದೇವರು ನಮಗೆ ತೋರಿಸಿಕೊಡುವ ತನಕ ನಮಗೆ ಸ್ವತಂತ್ರವಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು.
Kannada BSI Bible 2016
ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನಂಬಿಕೆಯ ಕಾಲ ಬರುವದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವದಕ್ಕಾಗಿ ಧರ್ಮಶಾಸ್ತ್ರದ ಕೈಕೆಳಗೆ ಕಾವಲಲ್ಲಿ ಮುಚ್ಚಲ್ಪಟ್ಟಿದ್ದೆವು.
Kannada Bible (KNCL) BSI 2016
ಕ್ರೈಸ್ತವಿಶ್ವಾಸದ ಕಾಲವು ಬರುವುದಕ್ಕೆ ಮೊದಲು ನಾವು ಧರ್ಮಶಾಸ್ತ್ರದ ನಿರ್ಬಂಧಕ್ಕೆ ಒಳಗಾಗಿ ಕೈದಿಗಳಂತೆ ಇದ್ದೆವು. ಈ ವಿಶ್ವಾಸವು ಪ್ರಕಟವಾಗುವವರೆಗೂ ಇದೇ ಪರಿಸ್ಥಿತಿ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂಬಿಕೆ ಬರುವುದಕ್ಕೆ ಮುಂಚೆ ನಾವು ನಿಯಮದ ಅಧೀನದಲ್ಲಿ ಇದ್ದೆವು. ಬರಲಿರುವ ಆ ನಂಬಿಕೆಯು ಪ್ರಕಟವಾಗುವ ತನಕ ನಾವು ಸೆರೆಯಾದವರಂತೆ ಇದ್ದೆವು.