Galatians 3:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಕ್ರಿಸ್ತನು ಬರುವ ತನಕ ಧರ್ಮಶಾಸ್ತ್ರವು ನಮಗೆ ಯಜಮಾನನಾಗಿತ್ತು. ಕ್ರಿಸ್ತನು ಬಂದ ತರುವಾಯ ನಾವು ನಂಬಿಕೆಯ ಮೂಲಕ ನೀತಿವಂತರಾಗಿರಲು ಸಾಧ್ಯವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.
Kannada BSI Bible 2016
ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಧರ್ಮಶಾಸ್ತ್ರವು ನಮ್ಮನ್ನು ಕಾಯುವ ಆಳಿನಂತಾಗಿದೆ; ನಾವು ನಂಬಿಕೆಯಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದುವದಕ್ಕಾಗಿ ಕ್ರಿಸ್ತನಲ್ಲಿಗೆ ಸೇರುವ ತನಕ ಅದು ನಮ್ಮನ್ನು ಕಾಯುತ್ತದೆ.
Kannada Bible (KNCL) BSI 2016
ಅಂತೆಯೇ, ವಿಶ್ವಾಸದ ಮೂಲಕ ನಾವು ದೇವರೊಡನೆ ಸತ್ಸಂಬಂಧ ಹೊಂದುವಂತೆ ಕ್ರಿಸ್ತಯೇಸು ಬರುವತನಕ ಅದು ನಮಗೆ ಕಾವಲಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲಾಗಿ ನಿಯಮವು ನಮ್ಮ ಪೋಷಕನಂತಿತ್ತು. ನಾವು ನಂಬಿಕೆಯ ಮೂಲಕ ನೀತಿವಂತರಾಗುವುದಕ್ಕಾಗಿ ಕ್ರಿಸ್ತ ಯೇಸುವಿನ ಬಳಿಗೆ ತರುವ ತನಕ ನಮ್ಮನ್ನು ಪೋಷಿಸುತ್ತದೆ.