Galatians 3:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?
Kannada BSI Bible 2016
ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು ಯಾತರಿಂದಾಯಿತು? ನೀವು ನೇಮನಿಷ್ಠೆಗಳನ್ನನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ? ನಂಬಿದ್ದರಿಂದಲೇ.
Kannada Bible (KNCL) BSI 2016
ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಜವಾಗಿಯೂ ವ್ಯರ್ಥವಾಯಿತು. ದೇವರು ಪವಿತ್ರ ಆತ್ಮರನ್ನು ನಿಮಗೆ ಕೊಟ್ಟದ್ದು ಮತ್ತು ನಿಮ್ಮಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದು ನಿಯಮದ ಕ್ರಿಯೆಗಳಿಂದಲೋ ಅಥವಾ ನೀವು ಕೇಳಿ ನಂಬಿದ್ದರಿಂದಲೋ?