Galatians 3:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಇದನ್ನು ನಂಬಿದ್ದರಿಂದಲೇ ಆಶೀರ್ವಾದ ಹೊಂದಿದನು. ಇದೇ ನಿಯಮ ಇಂದಿಗೂ ಅನ್ವಯಿಸುತ್ತದೆ. ಅವನು ಆಶೀರ್ವಾದ ಹೊಂದಿದಂತೆಯೇ ನಂಬಿಕೆಯಿಡುವ ಜನರೆಲ್ಲರೂ ಆಶೀರ್ವಾದ ಹೊಂದುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.
Kannada BSI Bible 2016
ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಸೌಭಾಗ್ಯವನ್ನು ಹೊಂದುವರು.
Kannada Bible (KNCL) BSI 2016
ಹೀಗಿರಲಾಗಿ, ವಿಶ್ವಾಸದಿಂದ ಬಾಳುವವರು ವಿಶ್ವಾಸಿಯಾದ ಅಬ್ರಹಾಮನು ಪಡೆದ ಸೌಭಾಗ್ಯವನ್ನೇ ಪಡೆಯುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ದೇವರನ್ನು ನಂಬುವ ಎಲ್ಲರೂ ಅಬ್ರಹಾಮನು ಆಶೀರ್ವಾದ ಹೊಂದಿದ ಹಾಗೆಯೇ ಆಶೀರ್ವಾದ ಹೊಂದುವರು.