Galatians 4:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಮತ್ತೆ ಹೇಳುವುದೇನೆಂದರೆ: ಬಾಧ್ಯಸ್ತನು ಬಾಲಕನಾಗಿರುವಾಗ ಅವನಿಗೂ ಗುಲಾಮನಿಗೂ ಯಾವ ವ್ಯತ್ಯಾಸವೂ ಇಲ್ಲ. ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಅವನು ಗುಲಾಮನಂತಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು.
Kannada BSI Bible 2016
ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾನು ಹೇಳುವದೇನಂದರೆ ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆ ಇರುವನೇ ಹೊರತು ಬೇರೆಯಿಲ್ಲ.
Kannada Bible (KNCL) BSI 2016
ನಾನು ಮತ್ತೆ ಹೇಳುವುದೇನೆಂದರೆ; ವಾರಸುದಾರನು ತಂದೆಯ ಆಸ್ತಿಗೆಲ್ಲಾ ಹಕ್ಕುದಾರನಾಗಿದ್ದರೂ, ಅವನು ಬಾಲಕನಾಗಿರುವ ತನಕ ಅವನಿಗೂ ಆಳಿಗೂ ವ್ಯತ್ಯಾಸವಿರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ಹೇಳುವುದೇನೆಂದರೆ, ವಾರಸುದಾರನು ತಾನು ಇಡೀ ಆಸ್ತಿಗೆಲ್ಲಾ ಧಣಿಯಾಗಿದ್ದರೂ ಬಾಲಕನಾಗಿರುವ ತನಕ ಅವನಿಗೂ ದಾಸನಿಗೂ ವ್ಯತ್ಯಾಸವಿರುವುದಿಲ್ಲ.