Galatians 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ನಾನೂ ನಿಮ್ಮಂತಿದ್ದೆನು. ಆದ್ದರಿಂದ ದಯವಿಟ್ಟು ನನ್ನಂತೆ ಆಗಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನಾನು ನಿಮ್ಮಂತೆ ಆದಹಾಗೆ ನೀವು ನನ್ನಂತೆ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯ ಮಾಡಲಿಲ್ಲ.
Kannada BSI Bible 2016
ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನಾನು ನಿಮ್ಮ ಹಾಗೆ ಆದದ್ದರಿಂದ ನೀವು ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯಮಾಡಲಿಲ್ಲ.
Kannada Bible (KNCL) BSI 2016
ಪ್ರಿಯ ಸಹೋದರರೇ, ನಾನು ನಿಮ್ಮಂತೆ ಆದಹಾಗೆ, ನೀವೂ ನನ್ನಂತೆ ಆಗಬೇಕೆಂದು ಕಳಕಳಿಯಿಂದ ಕೇಳಿಕೊಳ್ಳುತ್ತೇನೆ. ನೀವು ನನಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಾನು ನಿಮ್ಮ ಹಾಗೆ ಆದ್ದರಿಂದ ನೀವು ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೆ ಯಾವ ಕೇಡನ್ನೂ ಮಾಡಲಿಲ್ಲ.