Galatians 4:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೊದಲು ನೀವು ನನಗೆ ಬಹು ಒಳ್ಳೆಯವರಾಗಿದ್ದಿರಿ. ನಾನು ನಿಮ್ಮ ಬಳಿಗೆ ಮೊದಲನೆ ಸಲ ಬಂದದ್ದು ನನ್ನ ಅನಾರೋಗ್ಯದ ನಿಮಿತ್ತವೆಂದು ನಿಮಗೆ ಗೊತ್ತಿದೆ. ನಾನು ನಿಮಗೆ ಸುವಾರ್ತೆಯನ್ನು ತಿಳಿಸಿದ್ದು ಆವಾಗಲೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
Kannada BSI Bible 2016
ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ಸರ್ತಿ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
Kannada Bible (KNCL) BSI 2016
ನಾನು ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲೇ ಇದ್ದು ಮೊತ್ತಮೊದಲ ಬಾರಿಗೆ ಶುಭಸಂದೇಶವನ್ನು ನಿಮಗೆ ಸಾರಲು ಆಸ್ಪದವಾಯಿತು. ಇದನ್ನು ನೀವು ಬಲ್ಲಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಮುಂಚೆ ನಿಮಗೆ ಸುವಾರ್ತೆ ಸಾರಿದ್ದು, ನನ್ನ ಶರೀರದ ಬಲಹೀನತೆಯಿಂದ ಎಂದು ನೀವು ಬಲ್ಲಿರಿ.