Galatians 4:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಅನಾರೋಗ್ಯವು ನಿಮಗೆ ಹೊರೆಯಾಗಿತ್ತು. ಆದರೆ ನೀವು ನನ್ನ ವಿಷಯದಲ್ಲಿ ಬೇಸರಮಾಡಿಕೊಳ್ಳಲಿಲ್ಲ. ನೀವು ನನ್ನನ್ನು ಕಳುಹಿಸಿಬಿಡಲಿಲ್ಲ. ದೇವದೂತನೋ ಎಂಬಂತೆ ನೀವು ನನ್ನನ್ನು ಸ್ವಾಗತಿಸಿದಿರಿ; ಸ್ವತಃ ಯೇಸು ಕ್ರಿಸ್ತನೋ ಎಂಬಂತೆ ನನ್ನನ್ನು ಸ್ವೀಕರಿಸಿಕೊಂಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ.
Kannada BSI Bible 2016
ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಶರೀರದಲ್ಲಿ ನಿಮ್ಮ ಬೇಸರಿಕೆಗೆ ಆಸ್ಪದವಾದದ್ದನ್ನು ನೀವು ಹೀನೈಸಲಿಲ್ಲ, ಓಕರಿಸಲಿಲ್ಲ; ನನ್ನನ್ನು ದೇವದೂತನಂತೆ ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿರಿ.
Kannada Bible (KNCL) BSI 2016
ನನ್ನ ದೇಹಸ್ಥಿತಿ ನಿಮಗೆ ಬೇಸರವನ್ನುಂಟುಮಾಡುವಂಥದ್ದಾಗಿದ್ದರೂ ನೀವು ನನ್ನನ್ನು ತಿರಸ್ಕರಿಸಲಿಲ್ಲ; ಅಸಹ್ಯಪಡಲಿಲ್ಲ. ನನ್ನನ್ನು ದೇವದೂತನಂತೆ ಏಕೆ, ಕ್ರಿಸ್ತಯೇಸುವಿನಂತೆಯೇ ಭಾವಿಸಿ ಉಪಚರಿಸಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ದೇಹಸ್ಥಿತಿ ನಿಮಗೆ ಬೇಸರಗೊಳಿಸುವುದಾಗಿದ್ದರೂ ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸುವಿನಂತೆಯೂ ಸೇರಿಸಿಕೊಂಡಿರಿ.