Galatians 4:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನೀವು ಬಹು ಸಂತೋಷವುಳ್ಳವರಾಗಿದ್ದಿರಿ. ಆ ಆನಂದವು ಈಗ ಎಲ್ಲಿದೆ? ನನಗೆ ಸಹಾಯ ಮಾಡಲು ನೀವು ಏನು ಬೇಕಾದರೂ ಮಾಡುವುದಕ್ಕೆ ಸಿದ್ಧರಾಗಿದ್ದಿರೆಂಬುದು ನನ್ನ ನೆನಪಿನಲ್ಲಿದೆ. ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಟ್ಟುಬಿಡುತ್ತಿದ್ದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ.
Kannada BSI Bible 2016
ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ; ಆ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿಹೇಳುತ್ತೇನೆ.
Kannada Bible (KNCL) BSI 2016
ಅದೊಂದು ಭಾಗ್ಯವೆಂದೇ ತಿಳಿದಿರಿ. ಆ ಭಾವನೆ ಈಗೆಲ್ಲಿದೆ? ಆಗ, ಬೇಕಾಗಿದ್ದಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಾನು ಹೇಳಬಲ್ಲೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕೋರಿದ ಆ ಶುಭವೆಲ್ಲಿ? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಿಮ್ಮ ವಿಷಯವಾಗಿ ನಾನು ಸಾಕ್ಷಿಕೊಡುತ್ತೇನೆ.