Galatians 4:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವರ ಉದ್ದೇಶವು ಒಳ್ಳೆಯದಾಗಿದ್ದಾಗ ಮಾತ್ರ ನಿಮಗೆ ಒಳ್ಳೆಯದಾಗುತ್ತದೆ. ಇದು ಸತ್ಯ. ನಾನು ನಿಮ್ಮೊಂದಿಗಿರುವಾಗಲೂ ನಿಮ್ಮಿಂದ ದೂರವಿರುವಾಗಲೂ ಇದು ಸತ್ಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೆಯ ವಿಷಯಕ್ಕಾಗಿ ನೀವು ಆಸಕ್ತಿಯನ್ನು ತೋರಿಸುವುದು ಒಳ್ಳೆಯದೇ.
Kannada BSI Bible 2016
ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಆಸಕ್ತರಾಗಿರುವದು ಒಳ್ಳೇದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಮೆಚ್ಚಿಸಿಕೊಳ್ಳುವದು ಒಳ್ಳೇದೇ.
Kannada Bible (KNCL) BSI 2016
ನಾನು ನಿಮ್ಮ ಬಳಿ ಇರಲಿ, ಇಲ್ಲದಿರಲಿ, ಬೇರೆಯವರು ನಿಮ್ಮಲ್ಲಿ ಅಷ್ಟು ಆಸಕ್ತರಾಗಿರುವುದು ಒಳ್ಳೆಯದೇ. ಆದರೆ ಅಂಥ ಆಸಕ್ತಿ ಸದುದ್ದೇಶದಿಂದ ಕೂಡಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಉತ್ತಮ ಕಾರ್ಯಗಳಲ್ಲಿ ನೀವು ಆಸಕ್ತರಾಗಿರುವುದು ಒಳ್ಳೆಯದು.