Galatians 4:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನಾನು ನಿಮ್ಮೊಂದಿಗಿದ್ದಿದ್ದರೆ ಬೇರೊಂದು ರೀತಿಯಲ್ಲಿ ತಿಳಿಸಬಹುದಾಗಿತ್ತು. ನಿಮ್ಮ ವಿಷಯದಲ್ಲಿ ಈಗ ಏನು ಮಾಡಬೇಕೊ ನನಗೆ ತಿಳಿಯದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ರೀತಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!
Kannada BSI Bible 2016
ನಾನು ನಿಮ್ಮ ವಿಷಯದಲಿ ಸಂಶಯಪಡುವವನಾದದರಿಂದ ಈಗ ನಿಮ್ಮ ಜೊತೆ ಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತಿಳಿಯದು. ನಾನು ಈಗಲೂ ನಿಮ್ಮಲ್ಲಿದ್ದು ಬೇರೆ ರೀತಿಯಿಂದ ಮಾತಾಡುವದಕ್ಕೆ ಎಷ್ಟೋ ಆಶೆಪಡುತ್ತೇನೆ.
Kannada Bible (KNCL) BSI 2016
ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ವೈಖರಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈಗ ನಿಮ್ಮ ಜೊತೆಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ, ಏಕೆಂದರೆ, ನಾನು ನಿಮ್ಮ ವಿಷಯದಲ್ಲಿ ಚಿಂತಿಸುವವನಾಗಿದ್ದೇನೆ.