Galatians 4:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮಲ್ಲಿ ಕೆಲವರು ಮೋಶೆಯ ಧರ್ಮಶಾಸ್ತ್ರಕ್ಕೆ ಇನ್ನೂ ಅಧೀನರಾಗಿರಲು ಇಷ್ಟಪಡುತ್ತೀರಿ. ಧರ್ಮಶಾಸ್ತ್ರವು ಏನು ಹೇಳುತ್ತದೆಂಬುದು ನಿಮಗೆ ಗೊತ್ತಿದೆಯೋ? ನನಗೆ ತಿಳಿಸಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ.
Kannada BSI Bible 2016
ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಶಾಸ್ತ್ರಾಧೀನರಾಗುವದಕ್ಕೆ ಮನಸ್ಸುಳ್ಳವರೇ, ಧರ್ಮಶಾಸ್ತ್ರಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
Kannada Bible (KNCL) BSI 2016
ಧರ್ಮಶಾಸ್ತ್ರಕ್ಕೆ ಅಧೀನರಾಗಲು ಆಶಿಸುವವರೇ, ನನಗೆ ಉತ್ತರ ಕೊಡಿ: ಅದೇ ಧರ್ಮಶಾಸ್ತ್ರ ಹೇಳುವುದನ್ನು ನೀವು ಕೇಳಿಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯ ನಿಯಮದ ಕೆಳಗಿರಲು ಬಯಸುವವರೇ, ನಿಯಮವು ಏನು ಹೇಳುತ್ತದೆಯೆಂದು ನೀವು ಸ್ಪಷ್ಟವಾಗಿ ಅರ್ಥಮಾಡಿಕೊಂಡಿದ್ದೀರಾ? ನನಗೆ ಹೇಳಿರಿ.