Galatians 4:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪವಿತ್ರ ಗ್ರಂಥವು ಹೇಳುವುದೇನೆಂದರೆ, ಅಬ್ರಹಾಮನಿಗೆ ಇಬ್ಬರು ಗಂಡುಮಕ್ಕಳಿದ್ದರು. ಒಬ್ಬ ಮಗನ ತಾಯಿಯು ದಾಸತ್ವದಲ್ಲಿದ್ದಳು, ಮತ್ತೊಬ್ಬ ಮಗನ ತಾಯಿಯು ಸ್ವತಂತ್ರಳಾಗಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿ ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನು ದಾಸಿಯಲ್ಲಿ ಹುಟ್ಟಿದವನು, ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು.
Kannada BSI Bible 2016
ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿ ಬರೆದಿರುವದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು; ಒಬ್ಬನು ತೊತ್ತಿನಿಂದ ಹುಟ್ಟಿದವನು, ಒಬ್ಬನು ಧರ್ಮಪತ್ನಿಯಿಂದ ಹುಟ್ಟಿದವನು.
Kannada Bible (KNCL) BSI 2016
ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು: ಒಬ್ಬನು ದಾಸಿಯಿಂದ ಹುಟ್ಟಿದವನು; ಇನ್ನೊಬ್ಬನು ಧರ್ಮಪತ್ನಿಯಿಂದ ಹುಟ್ಟಿದವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ದಾಸಿಯಿಂದ ಒಬ್ಬನು, ಧರ್ಮಪತ್ನಿಯಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಪವಿತ್ರ ವೇದದಲ್ಲಿ ಬರೆದಿದೆ.