Galatians 4:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಾನವ ಸಹಜವಾದ ರೀತಿಯಲ್ಲಿ ಅಬ್ರಹಾಮನ ಮಗನು ಆ ದಾಸಿಯಲ್ಲಿ ಹುಟ್ಟಿದನು. ಸ್ವತಂತ್ರಳಾಗಿದ್ದ ಸ್ತ್ರೀಯಲ್ಲಿ ಹುಟ್ಟಿದ ಮಗನಾದರೋ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನದ ಫಲವಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು.
Kannada BSI Bible 2016
ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೊತ್ತಿನ ಮಗನು ಸ್ವಾಭಾವಿಕವಾಗಿ ಹುಟ್ಟಿದನು. ಧರ್ಮಪತ್ನಿಯ ಮಗನೋ ವಾಗ್ದಾನದ ಫಲವಾಗಿ ಹುಟ್ಟಿದನು.
Kannada Bible (KNCL) BSI 2016
ದಾಸಿಯ ಮಗ ಪ್ರಕೃತಿ ಸಹಜವಾಗಿ ಹುಟ್ಟಿದವನು; ಧರ್ಮಪತ್ನಿಯ ಮಗನಾದರೋ ವಾಗ್ದಾನದ ಫಲವಾಗಿ ಹುಟ್ಟಿದವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾಸಿಯ ಮಗನು ಶಾರೀರಿಕವಾಗಿ ಹುಟ್ಟಿದವನು. ಆದರೆ ಧರ್ಮಪತ್ನಿಯ ಮಗನಾದರೋ ದೇವರ ವಾಗ್ದಾನದ ಮೂಲಕ ಹುಟ್ಟಿದನು.