Galatians 4:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸಂಗತಿಗಳು ನಮಗೆ ಉಪಮಾನವಾಗಿವೆ. ದೇವರ ಮತ್ತು ಮನುಷ್ಯರ ನಡುವೆ ಆದ ಎರಡು ಒಡಂಬಡಿಕೆಗಳಿಗೆ ಈ ಇಬ್ಬರು ಸ್ತ್ರೀಯರು ಸಂಕೇತವಾಗಿದ್ದಾರೆ. ಸೀನಾಯಿ ಪರ್ವತದ ಮೇಲೆ ದೇವರು ಕೊಟ್ಟ ಧರ್ಮಶಾಸ್ತ್ರವೇ ಮೊದಲನೆ ಒಡಂಬಡಿಕೆ. ಈ ಒಡಂಬಡಿಕೆಯ ಅಧೀನದಲ್ಲಿದ್ದ ಜನರು ಗುಲಾಮರಂತಿದ್ದರು. ತಾಯಿಯಾದ ಹಾಗರಳು ಆ ಒಡಂಬಡಿಕೆಯಂತಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು.
Kannada BSI Bible 2016
ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು; ಅದೇ ಹಾಗರ್.
Kannada Bible (KNCL) BSI 2016
ಇದೊಂದು ಅಲಂಕಾರ ರೂಪ. ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳಿಗೆ ಸದೃಶರಾಗಿದ್ದಾರೆ. ಒಂದು, ಸೀನಾಯ್ ಪರ್ವತದಲ್ಲಿ ಮಾಡಲಾದ ಒಡಂಬಡಿಕೆ; ಅದು ದಾಸತ್ವಕ್ಕೆ ಮಕ್ಕಳನ್ನು ಹೆರುತ್ತದೆ. ಅದನ್ನು ಸೂಚಿಸುವವಳೇ ದಾಸಿ ಹಾಗರಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಸಂಗತಿಗಳು ಉಪಮಾನವಾಗಿವೆ. ಹೇಗೆಂದರೆ, ಇವರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು. ಅದೇ ಹಾಗರ್.