Galatians 4:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ಈ ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.
Kannada BSI Bible 2016
ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗರ್ ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತ. ಅವಳು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆ ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
Kannada Bible (KNCL) BSI 2016
ಅರೇಬಿಯಾದಲ್ಲಿರುವ ಸೀನಾಯ್ ಪರ್ವತವನ್ನು ಪ್ರತಿನಿಧಿಸುವ ಈ ಹಾಗರಳು ಈಗಿನ ಜೆರುಸಲೇಮ್ ನಗರವನ್ನು ಹೋಲುತ್ತಾಳೆ. ಹೇಗೆಂದರೆ, ಜೆರುಸಲೇಮ್ ತನ್ನ ಮಕ್ಕಳ ಸಮೇತವಾಗಿ ದಾಸತ್ವದಲ್ಲಿ ಇದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗರ್ ಅರೇಬಿಯಾದಲ್ಲಿರುವ ಸೀನಾಯಿ ಪರ್ವತ. ಅದು ಈಗಿನ ಯೆರೂಸಲೇಮಿಗೆ ಸರಿಹೊಂದುತ್ತಾಳೆ. ಏಕೆಂದರೆ ಆಕೆಯು ಈಗಲೂ ತನ್ನ ಮಕ್ಕಳ ಸಹಿತ ದಾಸ್ಯದಲ್ಲಿದ್ದಾಳೆ.