Galatians 4:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹೆರದ ಬಂಜೆಯೇ, ಆನಂದಿಸು. ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು, ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಬರೆದಿದೆಯಲ್ಲಾ.
Kannada BSI Bible 2016
ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆರದ ಬಂಜೆಯೇ, ಆನಂದವಾಗಿರು, ಪ್ರಸವವೇದನೆಯಿಲ್ಲದವಳೇ, ಸ್ವರವೆತ್ತಿ ಕೂಗು; ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಮಕ್ಕಳು ಹೆಚ್ಚು ಎಂದು ಬರೆದದೆಯಲ್ಲಾ.
Kannada Bible (KNCL) BSI 2016
“ಸಂತಾನವಿಲ್ಲದ ಸ್ತ್ರೀಯೇ, ಸಂತೋಷಿಸು ಪ್ರಸವವೇದನೆಯನರಿಯದವಳೇ, ಹರ್ಷೋದ್ಗಾರಮಾಡು ಗಂಡನುಳ್ಳವಳಿಗಿಂತ ಕೈಬಿಟ್ಟವಳ ಸಂತಾನ ಹೆಚ್ಚು.” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, “ಬಂಜೆಯೇ, ಹೆರದವಳೇ, ಆನಂದಿಸು. ಪ್ರಸವವೇದನೆ ಪಡದವಳೇ, ಸ್ವರವೆತ್ತಿ ಹರ್ಷದಿಂದ ಸ್ವರವೆತ್ತಿ ಕೂಗು; ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆ,” ಎಂದು ಪವಿತ್ರ ವೇದದಲ್ಲಿ ಬರೆದಿದೆ.