Galatians 4:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಪವಿತ್ರ ಗ್ರಂಥವು ಏನು ಹೇಳುತ್ತದೆ? “ದಾಸಿಯನ್ನು ಮತ್ತು ಅವಳ ಮಗನನ್ನು ಹೊರಗೆ ಹಾಕು; ಸ್ವತಂತ್ರಳಾದ ಸ್ತ್ರೀಯ ಮಗನು ತನ್ನ ತಂದೆಯು ಹೊಂದಿರುವ ಪ್ರತಿಯೊಂದನ್ನು ಪಡೆದುಕೊಳ್ಳುವನು. ಆದರೆ ದಾಸಿಗೆ ಏನೂ ದೊರೆಯುವುದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದೇವರ ವಾಕ್ಯವು ಏನು ಹೇಳುತ್ತದೆ? “ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು” ಎಂದು ಹೇಳುತ್ತದೆ.
Kannada BSI Bible 2016
ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಶಾಸ್ತ್ರವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯನಾಗಬಾರದೆಂದು ಹೇಳುತ್ತದೆ.
Kannada Bible (KNCL) BSI 2016
ಪವಿತ್ರಗ್ರಂಥ ಹೇಳುವುದಾದರೂ ಏನು? “ದಾಸಿಯನ್ನೂ ಅವಳ ಮಗನನ್ನೂ ಹೊರಕ್ಕೆ ದೂಡು; ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಪಾಲುಗಾರನಾಗಕೂಡದು.” ಎಂದಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪವಿತ್ರ ವೇದವು ಏನು ಹೇಳುತ್ತದೆ? “ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಏಕೆಂದರೆ ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಎಂದಿಗೂ ವಾರಸುದಾರನಾಗಬಾರದು.” ಎಂದಲ್ಲವೇ?