Galatians 5:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬೇರೆ ಅಭಿಪ್ರಾಯಗಳನ್ನು ನೀವು ನಂಬುವುದಿಲ್ಲವೆಂದು ಪ್ರಭುವಿನಲ್ಲಿ ನಿಮ್ಮನ್ನು ಕುರಿತು ಭರವಸೆಯಿಂದಿದ್ದೇನೆ. ಯಾರೊ ಒಬ್ಬನು ಆ ಅಭಿಪ್ರಾಯಗಳಿಂದ ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾನೆ. ಅವನು ಯಾರೇ ಆಗಿದ್ದರೂ ದಂಡನೆ ಹೊಂದುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತಾಗಿ ನನಗೆ ಭರವಸೆ ಉಂಟು. ನಿಮ್ಮಲ್ಲಿ ಬೇಧವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ, ಅವನು ದಂಡನೆಯನ್ನು ಅನುಭವಿಸುವನು.
Kannada BSI Bible 2016
ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗಂತೂ ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ಭರವಸ ಉಂಟು. ನಿಮ್ಮಲ್ಲಿ ಭೇದವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ ಬರುವ ದಂಡನೆಯನ್ನು ಅನುಭವಿಸುವನು.
Kannada Bible (KNCL) BSI 2016
ಭಿನ್ನಾಭಿಪ್ರಾಯಗಳಿಗೆ ನೀವು ಮಣಿಯುವುದಿಲ್ಲವೆಂದು ನಿಮ್ಮನ್ನು ಕುರಿತು ಪ್ರಭುವಿನಲ್ಲಿ ನನಗೆ ದೃಢವಾದ ನಂಬಿಕೆ ಇದೆ. ನಿಮ್ಮಲ್ಲಿ ಗೊಂದಲ ಎಬ್ಬಿಸುವವನು ಯಾರೇ ಆಗಿರಲಿ, ಅವನು ದೈವದಂಡನೆಗೆ ಗುರಿಯಾಗುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಬೇರೆ ರೀತಿಯಿಂದ ಯೋಚಿಸುವುದಿಲ್ಲವೆಂದು ಕರ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಇದೆ. ಆದರೆ ನಿಮ್ಮನ್ನು ತೊಂದರೆ ಪಡಿಸುವವನು ಯಾವನಾದರೂ ಸರಿ, ಅವನು ದಂಡನೆಯನ್ನು ಅನುಭವಿಸುವನು.