Galatians 5:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಸಹೋದರ ಸಹೋದರಿಯರೇ, ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನು ಬೋಧಿಸುವುದಿಲ್ಲ. ಸುನ್ನತಿಯ ಅಗತ್ಯತೆಯನ್ನು ಕುರಿತು ಉಪದೇಶಿಸುವವನಾಗಿದ್ದರೆ, ನಾನಿನ್ನೂ ಹಿಂಸೆಗೆ ಒಳಗಾಗಿರುವುದೇಕೆ? ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನಿನ್ನೂ ಉಪದೇಶಿಸುವುದಾಗಿದ್ದರೆ, ಶಿಲುಬೆಯ ವಿಷಯವಾದ ನನ್ನ ಬೋಧನೆಗೆ ಅಡ್ಡಿಯಾಗುವುದೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನಾನಾದರೋ ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ನನಗೆ ಹಿಂಸೆಯಾಗುವುದಾದರೂ ಯಾಕೆ? ಹಾಗಿದ್ದ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾಗುವ ತೊಂದರೆಗಳು ನೀಗಿ ಹೋಯಿತಲ್ಲಾ?
Kannada BSI Bible 2016
ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಾದರೆ ಸಹೋದರರೇ, ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ಹೋಯಿತಲ್ಲಾ?
Kannada Bible (KNCL) BSI 2016
ಸಹೋದರರೇ, ಸುನ್ನತಿಮಾಡಿಸಿಕೊಳ್ಳುವುದು ಅವಶ್ಯಕವೆಂದು ನಾನು ಇನ್ನೂ ಬೋಧಿಸುತ್ತಿರುವುದಾಗಿ ಕೆಲವರು ಹೇಳುತ್ತಿದ್ದಾರಲ್ಲವೇ? ಹಾಗೆ ಬೋಧಿಸುತ್ತಿರುವುದಾದರೆ ನಾನೇಕೆ ಹೀಗೆ ಹಿಂಸೆಬಾಧೆಗಳನ್ನು ಅನುಭವಿಸಬೇಕಾಗುತ್ತಿತ್ತು? ನಾನು ಹಾಗೇನಾದರೂ ಬೋಧಿಸಿದ್ದರೆ, ಶಿಲುಬೆಯ ಸಂದೇಶದಿಂದ ಯಾವ ಅಡ್ಡಿ ಆತಂಕವೂ ಉಂಟಾಗುತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪ್ರಿಯರೇ, ನಾನು ಸುನ್ನತಿಯಾಗಬೇಕೆಂದು ಇನ್ನೂ ಬೋಧಿಸುವವನಾಗಿದ್ದರೆ, ಈಗಲೂ ನನಗೆ ಹಿಂಸೆಯಾಗುತ್ತಿರುವುದು ಏಕೆ? ಹಾಗಾದರೆ ಶಿಲುಬೆಯ ಸಂದೇಶ ಸಾರುವುದರಿಂದ ಯಾವ ಆತಂಕವೂ ಉಂಟಾಗುತ್ತಿರಲಿಲ್ಲವಲ್ಲಾ?