Galatians 5:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
Kannada BSI Bible 2016
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನಸ್ವಭಾವಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
Kannada Bible (KNCL) BSI 2016
ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.