Galatians 5:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಶರೀರಭಾವವು ದೇವರಾತ್ಮನಿಗೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತದೆ. ದೇವರಾತ್ಮನು ನಮ್ಮ ಶರೀರಭಾವಕ್ಕೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತಾನೆ. ಆದ್ದರಿಂದ ನೀವು ನಿಜವಾಗಿಯೂ ಬಯಸುವಂಥವುಗಳನ್ನು ಮಾಡಲಾಗದಂತೆ ಅವು ಒಂದಕ್ಕೊಂದು ಹೋರಾಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.
Kannada BSI Bible 2016
ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಶರೀರಭಾವವು ಅಭಿಲಾಷಿಸುವದು ಆತ್ಮನಿಗೆ ವಿರುದ್ಧವಾಗಿದೆ, ಆತ್ಮನು ಅಭಿಲಾಷಿಸುವದು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಫಿಸುವದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.
Kannada Bible (KNCL) BSI 2016
ಏಕೆಂದರೆ, ದೈಹಿಕ ವ್ಯಾಮೋಹವು ಪವಿತ್ರಾತ್ಮರಿಗೆ ವಿರುದ್ಧವಾಗಿದೆ. ಪವಿತ್ರಾತ್ಮ ಆ ವ್ಯಾಮೋಹಕ್ಕೆ ವಿರುದ್ಧವಾಗಿದ್ದಾರೆ. ಇವೆರಡೂ ಒಂದಕ್ಕೊಂದು ಕಾದಾಡುವುದರಿಂದ ನಿಮ್ಮ ಬಯಕೆ ಕೈಗೂಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಮಾಂಸಭಾವವು ಆತ್ಮನಿಗೆ ವಿರುದ್ಧವಾಗಿಯೂ ಆತ್ಮನು ಮಾಂಸಭಾವಕ್ಕೆ ವಿರುದ್ಧವಾಗಿಯೂ ಆಶಿಸುತ್ತದೆ. ನೀವು ಮಾಡಬಯಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರೋಧವಾಗಿವೆ.