Galatians 5:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮತ್ಸರ, ಕುಡಿಕತನ ಮತ್ತು ಸ್ವೇಚ್ಫಾಚಾರದ ಕೂಟ, ಮೊದಲಾದವುಗಳೇ. ನಾನು ನಿಮ್ಮನ್ನು ಮೊದಲು ಎಚ್ಚರಿಸಿದಂತೆ ಈಗಲೂ ಎಚ್ಚರಿಸುತ್ತೇನೆ. ಇಂಥವುಗಳನ್ನು ಮಾಡುವ ಜನರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
Kannada BSI Bible 2016
ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳ ವಿಷಯದಲ್ಲಿ - ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ಹಿಂದೆ ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
Kannada Bible (KNCL) BSI 2016
ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.