Galatians 5:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮತ್ತೆ ನಾನು ಪ್ರತಿಯೊಬ್ಬನನ್ನೂ ಎಚ್ಚರಿಸುತ್ತೇನೆ. ನೀವು ಸುನ್ನತಿ ಮಾಡಿಸಿಕೊಂಡರೆ, ಧರ್ಮಶಾಸ್ತ್ರವನ್ನೆಲ್ಲಾ ಅನುಸರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ.
Kannada BSI Bible 2016
ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ - ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ.
Kannada Bible (KNCL) BSI 2016
ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನೂ ಇಡೀ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಲು ಬದ್ಧನಾಗಿದ್ದಾನೆ ಎಂದು ಪುನಃ ನಿಮಗೆ ನಾನು ಒತ್ತಿ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುನ್ನತಿ ಮಾಡಿಸಿಕೊಳ್ಳಲು ಬಯಸುವ ಪ್ರತಿಯೊಬ್ಬನೂ ನಿಯಮವನ್ನೆಲ್ಲಾ ಕೈಗೊಳ್ಳುವ ಹಂಗಿನಲ್ಲಿದ್ದಾನೆ ಎಂದು ಪುನಃ ದೃಢವಾಗಿ ಹೇಳುತ್ತೇನೆ.