Galatians 5:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಲು ಪ್ರಯತ್ನಿಸುವವರಾಗಿದ್ದರೆ, ದೇವರ ಕೃಪಾಶ್ರಯದಿಂದ ಬಿದ್ದುಹೋದ ಕಾರಣ ಕ್ರಿಸ್ತನೊಂದಿಗಿರುವ ನಿಮ್ಮ ಜೀವಿತವು ಅಂತ್ಯಗೊಳ್ಳುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.
Kannada BSI Bible 2016
ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಯಾರಾರು ಕರ್ಮಗಳಿಂದ ನೀತಿವಂತರಾಗಬೇಕೆಂದಿರುತ್ತಾರೋ ಅವರು ಕ್ರಿಸ್ತನಿಂದ ಅಗಲಿ ಹೋದರು. ಕೃಪಾಶ್ರಯದೊಳಗಿಂದ ಬಿದ್ದುಹೋದರು.
Kannada Bible (KNCL) BSI 2016
ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರ ಮೂಲಕವೇ ದೇವರೊಡನೆ ಸತ್ಸಂಬಂಧ ಪಡೆಯಬೇಕೆಂದಿರುವ ನೀವು ಕ್ರಿಸ್ತಯೇಸುವಿನಿಂದ ಬೇರ್ಪಟ್ಟಿದ್ದೀರಿ. ದೈವಾನುಗ್ರಹದಿಂದ ದೂರವಾಗಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಯಮದ ಮೂಲಕ ನೀತಿವಂತರಾಗಬೇಕೆಂದು ಪ್ರಯತ್ನಿಸುವವರು, ಕ್ರಿಸ್ತ ಯೇಸುವಿನಿಂದ ಬೇರ್ಪಟ್ಟಿದ್ದೀರಿ. ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.