Galatians 5:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.
Kannada BSI Bible 2016
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.
Kannada Bible (KNCL) BSI 2016
ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.