Galatians 6:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಕೆಲವರು ನಿಮ್ಮನ್ನು ಒತ್ತಾಯಿಸುತ್ತಿದ್ದಾರೆ. ತಮ್ಮನ್ನು (ಯೆಹೂದ್ಯರು) ಸ್ವೀಕರಿಸಿಕೊಳ್ಳಲಿ ಎಂಬುದೇ ಅವರ ಉದ್ದೇಶ. ಕ್ರಿಸ್ತನ ಶಿಲುಬೆಯ ದೆಸೆಯಿಂದ ತಾವು ಹಿಂಸೆಗೆ ಒಳಗಾಗಬಹುದೆಂಬ ಭಯದಿಂದ ಅವರು ಹೀಗೆ ಮಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.
Kannada BSI Bible 2016
ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹಿರಾಚಾರಗಳಿಂದ ಮಾನಪಡೆಯಬೇಕೆಂದಿರುವವರು ಸುನ್ನತಿಮಾಡಿಸಿಕೊಳ್ಳಿರಿ ಎಂಬದಾಗಿ ನಿಮ್ಮನ್ನು ಬಲಾತ್ಕರಿಸುತ್ತಾರೆ. ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದೊಂದೇ ಅವರ ಉದ್ದೇಶ.
Kannada Bible (KNCL) BSI 2016
ಬಾಹ್ಯಾಚಾರಗಳಿಂದ ತಾವು ಒಳ್ಳೆಯವರು ಎನಿಸಿಕೊಳ್ಳಬೇಕೆನ್ನುವವರು ನೀವು ಸುನ್ನತಿಮಾಡಿಸಿಕೊಳ್ಳಬೇಕೆಂದು ಬಲಾತ್ಕಾರ ಮಾಡುತ್ತಿದ್ದಾರೆ. ಕ್ರಿಸ್ತಯೇಸುವಿನ ಶಿಲುಬೆಯ ನಿಮಿತ್ತ ತಮಗೆ ಹಿಂಸೆಬಾಧೆಗಳು ಉಂಟಾಗಬಾರದು ಎಂಬುದೇ ಅವರ ಉದ್ದೇಶವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡುವವರೂ ತಮಗೆ ಕ್ರಿಸ್ತ ಯೇಸುವಿನ ಶಿಲುಬೆಯ ನಿಮಿತ್ತ ಹಿಂಸೆಯಾಗಬಾರದೆಂಬುದಕ್ಕಾಗಿಯೇ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಿಮ್ಮನ್ನು ಒತ್ತಾಯ ಮಾಡುತ್ತಾರೆ.