Galatians 6:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸುನ್ನತಿ ಮಾಡಿಸಿಕೊಂಡಿರುವ ಅವರೇ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ಆದರೆ ನಿಮಗೂ ಸುನ್ನತಿ ಮಾಡಿಸಿ ಅದರ ಬಗ್ಗೆ ಹೆಚ್ಚಳಪಡಬೇಕೆಂಬುದೇ ಅವರ ಆಸೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
Kannada BSI Bible 2016
ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುನ್ನತಿಮಾಡಿಸಿಕೊಳ್ಳುವ ತಾವಾದರೂ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವದಿಲ್ಲ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
Kannada Bible (KNCL) BSI 2016
ಸುನ್ನತಿಮಾಡಿಸಿಕೊಳ್ಳುವ ತಾವಾದರೂ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವುದಿಲ್ಲ. ಆದರೆ ನಿಮ್ಮ ದೈಹಿಕ ಸುನ್ನತಿಯಿಂದ, ಅವರು ಹೆಚ್ಚಳಿಕೆ ಗಳಿಸುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಬಯಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುನ್ನತಿ ಮಾಡಿಸಿಕೊಳ್ಳುವ ತಾವಾದರೋ ನಿಯಮವನ್ನು ಕೈಗೊಂಡು ನಡೆಯುವುದಿಲ್ಲ. ಆದರೆ ಅವರು ನಿಮ್ಮ ಶರೀರದ ಸುನ್ನತಿಯಿಂದ ಹೆಚ್ಚಳಪಡುವಂತೆ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.